ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡ್ತೀರಾ, ವಸೂಲಿಯಾಗಿದೆ 1 ಕೋಟಿ ರೂ. ದಂಡ... ಎಚ್ಚರ
Friday, July 30, 2021
ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡವರಿಗೆ ದಂಡ ವಿಧಿಸಲಾಗುತ್ತಿದೆ. ದ.ಕ.ಜಿಲ್ಲೆಯಲ್ಲಿ ಕೊರೊನಾ ನಿಯಮಾವಳಿ ಉಲ್ಲಂಘನೆ ಮಾಡಿದವರಿಗೆ ವಿಧಿಸಿರುವ ದಂಡದ ಮೊತ್ತ ಇಂದಿಗೆ 1,0016,717 ರೂ. ಆಗಿದೆ.
ಸರಕಾರದ ಆದೇಶದ ಮೇರೆಗೆ ಜನಸಾಮಾನ್ಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಕಾಣಿಸಿಕೊಂಡವರಿಗೆ ದಂಡ ವಿಧಿಸಲಾಗುತ್ತಿದೆ. ದ.ಕ.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಂಡ 82,384 ಮಂದಿಗೆ ಒಟ್ಟು 1,00,16717 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.