ಶಂಕರ್ ಮದುವೆಗೆ ಇಷ್ಟೊಂದು ಹಣ ಖರ್ಚು ಮಾಡಿರುವ ವಿಚಾರ ತಿಳಿದು ನೆಟ್ಟಿಗರು ಶಾಕ್ ಆಗಿದ್ದಾರೆ. ಯಾರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ. ಸರಳ ಮದುವೆ ಎಂದು ಹೇಳಿ ಇಷ್ಟೊಂದು ಖರ್ಚು ಮಾಡಿದ್ದಾರೆ, ಕೊರೋನಾದಿಂದ ಸಂಕಷ್ಟದಲ್ಲಿ ಜನರಿಗೆ ಇದರಿಂದ ಸಹಾಯ ಮಾಡಬಹುದಿತ್ತು, ಎಂಬುದು ನೆಟ್ಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನೂ ಕೆಲವು ದಿನಗಳಲ್ಲಿ ಸೆಲೆಬ್ರಿಟಿಗಳನ್ನು ಆಹ್ವಾನಿಸಿ ಆರತಕ್ಷತೆ ಮಾಡುವ ನಿರ್ಧಾರ ಮಾಡಿದ್ದಾರೆ. ದಿನಾಂಕ ಇನ್ನೂ ನಿಗದಿ ಆಗಿಲ್ಲವಾದರೂ ಸಣ್ಣ ಪುಟ್ಟ ತಯಾರಿ ನಡೆಸುತ್ತಿದ್ದಾರೆ.