
ಒಂದೇ ಮಾವಿನ ಮರದಲ್ಲಿ 121 ಬಗೆಯ ಹಣ್ಣುಗಳು ಏನಿದು ಅಚ್ಚರಿ..??
ನವದೆಹಲಿ: ಇಲ್ಲೊಂದು ಮಾವಿನಮರ ಅಚ್ಚರಿ ಮೂಡಿಸಿದೆ ಒಂದೇ ಮಾವಿನ ಮರದಲ್ಲಿ 121 ಬಗೆಯ ಹಣ್ಣುಗಳು ಕಾಣಸಿಗುತ್ತಿವೆ.
ಹದಿನೈದು ವರ್ಷಗಳ ಈ ಮಾವಿನ ಮರದಲ್ಲಿ ತೋಟಗಾರಿಕಾ ಪರಿಣತರು ಕಳೆದ ಐದು ವರ್ಷಗಳಿಂದ ಇಂಥದ್ದೊಂದು ಪ್ರಯೋಗ ನಡೆಸಿದ್ದು, ಇದೀಗ 121 ಬಗೆಯ ಹಣ್ಣುಗಳನ್ನು ಒಂದೇ ಮರದಲ್ಲಿ ಕಾಣಲು ಸಾಧ್ಯವಾಗುವಂತಾಗಿದೆ. ಉತ್ತರಪ್ರದೇಶದ ಸಹರನ್ಪುರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಯೋಗ ನಡೆದಿದೆ.
ತೋಟಗಾರಿಕಾ ಪ್ರಯೋಗ ಹಾಗೂ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ರಾಜೇಶ್ ಪ್ರಸಾದ್ ಅವರು 121 ಬಗೆಯ ಮಾವಿನ ಗಿಡದ ರೆಂಬೆಗಳನ್ನು ಒಂದೇ ಮರಕ್ಕೆ ಕಸಿ ಮಾಡುವ ಮೂಲಕ ಹೀಗೊಂದು ಅಚ್ಚರಿಗೆ ಕಾರಣವಾಗಿದ್ದಾರೆ.