ಮಂಗಳೂರು: 16 ವರ್ಷದ ಬಾಲಕಿಗೆ ಕಾರಿನಲ್ಲಿ ಲೈಂಗಿಕ ಕಿರುಕುಳ!
Sunday, July 18, 2021
ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳನ್ನು ವ್ಯಕ್ತಿಯೊಬ್ಬ ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದ ರುಕ್ಮಯ್ಯ ಮಡಿವಾಳ (42) ಎಂಬಾತ ಈ ಕೃತ್ಯ ಎಸಗಿದವನು. ಈತ 16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಂಟಿ ಇದ್ದ ವೇಳೆ ಮನೆಗೆ ಬಂದು ನನ್ನೊಂದಿಗೆ ಬರಬೇಕೆಂದು ಒತ್ತಾಯಿಸಿದ್ದ. ಆದರೆ ಬಾಲಕಿ ಹೋಗಲು ಒಪ್ಪದೆ ಇದ್ದಾಗ ಬಲವಂತವಾಗಿ ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಉಪ್ಪಿನಂಗಡಿ ಕಡೆ ಹೋಗಿದ್ದ. ಈ ವೇಳೆ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿ ಅಳಲು ಆರಂಭಿಸಿದ್ದಾಳೆ. ನಂತರ ಈತ ಬಾಲಕಿಯನ್ನು ಮನೆಗೆ ತಂದು ಬಿಟ್ಟಿದ್ದಾನೆ. ಈ ವಿಚಾರವನ್ನು ಮನೆಯವರಿಗೆ ಹೇಳಿದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.