-->

ಜುಲೈ 5 ರ ಬಳಿಕ ವೀಕೆಂಡ್ ಕರ್ಪ್ಯೂ ಇಲ್ಲ, ರಾತ್ರಿ 9 ರಿಂದ ಬೆಳಿಗ್ಗೆ 5 ವರೆಗೆ ನೈಟ್ ಕರ್ಪ್ಯೂ

ಜುಲೈ 5 ರ ಬಳಿಕ ವೀಕೆಂಡ್ ಕರ್ಪ್ಯೂ ಇಲ್ಲ, ರಾತ್ರಿ 9 ರಿಂದ ಬೆಳಿಗ್ಗೆ 5 ವರೆಗೆ ನೈಟ್ ಕರ್ಪ್ಯೂ

.


ಬೆಂಗಳೂರು: ಜುಲೈ 5 ರ ಬಳಿಕ ವಾರಂತ್ಯದ ಕರ್ಪ್ಯೂ ಇರುವುದಿಲ್ಲ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಾದ್ಯಂತ ಹೇರಿದ್ದ ವಾರಂತ್ಯ ಕರ್ಫ್ಯೂ ವನ್ನು ರದ್ದುಪಡಿಸಲಾಗಿದೆ, ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದರು.

ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ ಜುಲೈ 19ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ಹೊಸ ನಿಯಾಮವಳಿಗಳನ್ನು ಜಾರಿಗೆ ಮಾಡಲಾಗಿದೆ. 

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 

2. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. 

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. 
 
8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ. 

9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. 

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. 
 
12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ. 
 
 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99