
ಅಪಘಾತಕ್ಕೀಡಾದ ಖ್ಯಾತನಟಿ... ಸ್ಥಳದಲ್ಲೇ ಸಾವನ್ನಪ್ಪಿದ ಸ್ನೇಹಿತೆ..!
ಚೆನ್ನೈ: ತಮಿಳು ಬಿಗ್ಬಾಸ್ ಖ್ಯಾತಿಯ ನಟಿ ಯಶಿಕಾ ಆನಂದ ಅವರ ಕಾರು ಶನಿವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಅವರ ಸ್ನೇಹಿತೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಯಶಿಕಾಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವು ತಮಿಳುನಾಡಿನ ಚೆಂಗಲಪಟ್ಟು ಜಿಲ್ಲೆಯ ಮಾಮಲ್ಲಪುರಂ ಬಳಿ ಸಂಭವಿಸಿದೆ. ಮೃತಳನ್ನು ಹೈದರಾಬಾದ್ ಮೂಲದ ಭವಾನಿ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಇಬ್ಬರು ಯುವಕರು ಸಹ ಇದ್ದರು ಎಂದು ತಿಳಿದುಬಂದಿದೆ. ಯಶಿಕಾ ಮತ್ತು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭವಾನಿ ಮೃತದೇಹವನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.