2015ರ ಏ.18ರಂದು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ಯುವತಿಯ ಮೇಲೆ ಗಣೇಶ್, ಕಬೀರ್, ಮಜೀದ್ ಹಾಗೂ ಪಾಲ್ ಪಿಂಟೋ ಎಂಬುವರು ಆ್ಯಸಿಡ್ ಎರಚಿದ್ದರು. ಶೃಂಗೇರಿ ಪೊಲೀಸ್ ಠಾಣಾಧಿಕಾರಿ ಸುಧೀರ್ ಹೆಗ್ಡೆ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ದೋಷಿಗಳೆಂದು ಆದೇಶಿಸಿದ್ದು ಶಿಕ್ಷೆಯ ಪ್ರಮಾಣವನ್ನು ಜು.15ರಂದು ಘೋಷಿಸಲಿದ್ದಾರೆ.