ತನ್ನ ಮೈಬಣ್ಣದ ಬಗ್ಗೆ ಟ್ರೋಲ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ನಟಿ..!!
Wednesday, July 7, 2021
ತಮ್ಮ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಟ್ರೋಲ್ ಮಾಡಿದವರ ವಿರುದ್ಧ ಪಶ್ಚಿಮಬಂಗಾಳದ ನಟಿ ಶ್ರುತಿ ದಾಸ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ನನ್ನ ಮೈಬಣ್ಣದ ಬಗ್ಗೆ ಟ್ರೋಲ್ ಮಾಡಲಾಗುತ್ತಿದೆ. ಆದರೆ ಇದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ . ಆದ್ದರಿಂದ ಇಂತವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರುತಿ ದಾಸ್ ದೂರು ನೀಡಿದ್ದಾರೆ.
ಮಹಿಳೆಯರ ಬಗ್ಗೆ ನಿಂದನಾತ್ಮಕ ವಾಗಿ ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಆಯೋಗ ಪ್ರತಿಕ್ರಿಯಿಸಿದೆ.