
ಕರ್ನಾಟಕದ ಸಿಂಗಂ ಅಣ್ಣಾಮಲೈ ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ!
ನವದೆಹಲಿ; ಕರ್ನಾಟಕದಲ್ಲಿ ಸಿಂಗಂ ಎಂದೆ ಕರೆಯಲ್ಪಡುತ್ತಿದ್ದ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.
ಅಣ್ಣಾಮಲೈ ಅವರು ಐಪಿಎಸ್ ಅಧಿಕಾರಿಯಾಗಿ ಉಡುಪಿ, ಚಿಕ್ಕಮಗಳೂರು , ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳಿಂದ ಸಿಂಗಂ ಎಂದೆ ಕರೆಸಿಕೊಳ್ಳುತ್ತಿದ್ದರು. ಬೆಂಗಳೂರಿನಲ್ಲಿ ಕರ್ತವ್ಯ ದಲ್ಲಿ ಇರುವ ವೇಳೆ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಅವರು ಬಿಜೆಪಿ ಸೇರಿದ್ದರು. ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ಅವರನ್ನು ನೇಮಿಸಲಾಗಿತ್ತು. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅವರು ಸೋಲನ್ನನುಭವಿಸಿದ್ದರು. ಇದೀಗ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.