ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ - ಆರೋಪಿ ಬಂಧನ..
Monday, July 26, 2021
ಚಾಮರಾಜನಗರ : ಏಳು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಲೆ ನೋವಿನಿಂದ ಬಳಲುತಿದ್ದ ತನ್ನ ಅಜ್ಜಿಗೆ ಔಷಧ ತರಲು ಬಾಲಕಿ 8.30ರ ಸುಮಾರಿಗೆ ಅಂಗಡಿಗೆ ಹೋಗಿದ್ದು, ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಆರೋಪಿ ಸತೀಶ್ ಬಾಲಕಿಯನ್ನು ಮನೆಗೆ ಬಿಡುತ್ತೇನೆ ಎಂದು ಪುಸಲಾಯಿಸಿ ಸಮೀಪದ ಪೊದೆ ಬಳಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.