ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ
Tuesday, July 27, 2021
ಬೆಂಗಳೂರು; ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ನಿರ್ದೇಶನದಂತೆ ರಾಜೀನಾಮೆ ನೀಡಿದ ಬಳಿಕ ತೆರವಾದ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಳೆದು ತೂಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಆಯ್ಕೆಯನ್ನು ಘೋಷಿಸಲಾಯಿತು.
ಬಸವರಾಜ್ ಬೊಮ್ಮಾಯಿ ಅವರು ಗೃಹಸಚಿವರಾಗಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಆಗಿದ್ದರು. ನಾಳೆ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.