
ನಾನು ಅಳುವ ಫೋಟೋ ಹಾಕುತ್ತಿದ್ದಾರೆ, ನನ್ನ ಮಾನಹಾನಿಯಾಗಿದೆ ಎಂದ ಶಿಲ್ಪಾ ದೂರಿಗೆ ಮುಂಬಯಿ ಹೈಕೋರ್ಟ್ ಗರಂ..
ಮುಂಬೈ: ಬೆತ್ತಲೆ ವಿಡಿಯೋ ಪ್ರಕಣದಲ್ಲಿ ಸಿಲುಕಿರುವ ಉದ್ಯಮಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಆದ್ದರಿಂದ ನನ್ನ ಮಾನಹಾನಿಯಾಗಿದ್ದು 25 ಕೋಟಿ ರೂಪಾಯಿ ಪರಿಹಾರ ಬೇಕು ಎಂದು ಶಿಲ್ಪಾ ಶೆಟ್ಟಿ ಎಂದು ಮಾಧ್ಯಮಗಳ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಲ್ಲಿ ನಾವು ಕುಳಿತುಕೊಂಡು ಯಾವ ಮಾಧ್ಯಮ ಸಂಸ್ಥೆಗಳು ಯಾವ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡುತ್ತಿವೆ ಎನ್ನುವುದು ನೋಡುತ್ತಾ ಇರಬೇಕು ಎಂದು ನೀವು ಬಯಸುತ್ತೀರಾ? ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ಮಾಡಲಾಗಿದೆ. ಇದು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಗೆ ಕರೆಯುತ್ತೀರಿ? ನೀವು ಸಾರ್ವಜನಿಕ ಜೀವನದಲ್ಲಿದ್ದವರು. ಆದ್ದರಿಂದ ಸಹಜವಾಗಿ ಜನರು ನಿಮ್ಮ ಜೀವನದ ಬಗ್ಗೆ ಆಸಕ್ತರಾಗಿರುತ್ತಾರೆ. ನಟಿ ಅಳುತ್ತಾರೆ ಮತ್ತು ತಮ್ಮ ಗಂಡನೊಂದಿಗೆ ಜಗಳವಾಡಿದ್ದಾರೆ ಎಂದು ಬರೆದರೆ ಅದು ಮಾನಹಾನಿ ಹೇಗೆ ಆಗುತ್ತದೆ ಎಂದು ಕೋರ್ಟ್ ಪ್ರಶ್ನಿಸಿತು.
ಅವರು ತಮ್ಮ ಅರ್ಜಿಯಲ್ಲಿ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರು.