ರಾಜಮೌಳಿ ನಿರ್ದೇಶನದ 'ಆರ್ಆರ್ಆರ್' ಚಿತ್ರದ ಹಾಡೊಂದಕ್ಕೆ ಸುಮಾರು 3 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಆದರೆ 'ವಿಕ್ರಾಂತ್ ರೋಣ' ಚಿತ್ರದ ಹಾಡಿಗೆ 3 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
'ವಿಕ್ರಾಂತ್ ರೋಣ' ಚಿತ್ರದ ಕೊನೆಯ ಹಾಡಿನ ಚಿತ್ರೀಕರಣವಾಗಿದ್ದು, ಈ ಹಾಡಿಗೆ ಕಿಚ್ಚನ ಜೊತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹೆಜ್ಜೆ ಹಾಕಿದ್ದಾರೆ. ಈ ಹಾಡಿದೆ ಜಾಕ್ವೆಲಿನ್ ಮೂರು ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಜಾಕ್ವೆಲಿನ್ ಸಂಭಾವನೆ ಸೇರಿದಂತೆ ಸೆಟ್ ಮತ್ತು ಇತರೆ ಖರ್ಚುಗಳು ಸೇರಿ ಒಟ್ಟು ಐದು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಈ ಹಾಡಿಗಾಗಿ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವಕುಮಾರ್ ಸೆಟ್ ಹಾಕಿದ್ದಾರೆ. ಜೊತೆಗೆ ಈ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ