ಯುವತಿಯರನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಎಂದು ಪುಂಡರಿಂದ ಕಿರುಕುಳ..
Thursday, July 22, 2021
ನವದೆಹಲಿ: ಈಶಾನ್ಯ ರಾಜ್ಯದ ಯುವತಿಯರಿಗೆ ದೆಹಲಿಯಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.
ಯುವತಿಯರು ರಾತ್ರಿ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪುಂಡರು ನಿಮ್ಮ ರೇಟ್ ಎಷ್ಟು..??ಎಂದು ಪ್ರಶ್ನಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಯುವತಿಯೋರ್ವಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲು ಮುಂದಾಗುತ್ತಿದ್ದಂತೆ ಅವರು ಕ್ಷಮೆಯಾಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣದ ಬಗ್ಗೆ ದೂರು ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸಬೇಕು ಎಂದು ಮಹಿಳಾ ಆಯೋಗ ತಿಳಿಸಿದೆ.