'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಸ್ಟೆಪ್ ಹಾಕಲು ಬೆಂಗಳೂರಿಗೆ ಬಂದಿಳಿದ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡೀಸ್!
Saturday, July 10, 2021
ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ದಲ್ಲಿ ಒಂದು ಸ್ಪೆಷಲ್ ಹಾಡು ಇದ್ದು, ಈ ಹಾಡಿಗೆ ಕಿಚ್ಚನ ಜೊತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹೆಜ್ಜೆ ಹಾಕಲಿದ್ದಾರೆ. ಇದಕ್ಕಾಗಿ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.
ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದು, ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ನಿರ್ಮಾಪಕ ಜಾಕ್ ಮಂಜು ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದ ಕಾರ್ಯ ನಡೆಯುತ್ತಿದ್ದು, ಸುದೀಪ್ ಅವರ ಡಬ್ಬಿಂಗ್ ಮುಗಿದಿದೆ.
14 ಭಾಷೆಗಳಲ್ಲಿ ತೆರೆಗೆ ಬರಲಿರುವ ವಿಕ್ರಾಂತ್ ರೋಣ ಪ್ರಮುಖವಾಗಿ ಫ್ರೆಂಚ್, ಅರೆಬಿಕ್, ಸ್ಪ್ಯಾನಿಷ್, ಮಂಡರಿನ್ ಮತ್ತು ರಷ್ಯಾ ಭಾಷೆಗಳಿಗೆ ಕೂಡ ಡಬ್ ಆಗಲಿದೆ. ಸದ್ಯ ಜಾಕ್ವೆಲಿನ್ ಫರ್ನಾಂಡೀಸ್ ಸ್ಪೆಷಲ್ ಹಾಡಿನ ಚಿತ್ರೀಕರಣದೊಂದಿಗೆ ವಿಕ್ರಾಂತ್ ರೋಣ ಸಿನಿಮಾದ ಶೂಟಿಂಗ್ ಮುಕ್ತಾಯವಾಗಲಿದೆ.