
ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ- ಮಾಜಿ ಸಚಿವ ಅಭಯಚಂದ್ರ ಜೈನ್ ಘೋಷಣೆ (Video)
ಮಂಗಳೂರು; ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಅಭಯಚಂದ್ರ ಜೈನ್ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಸಕ್ತನಾಗಿರಲಿಲ್ಲ. ವಯಸ್ಸಾಗಿರುವುದು ಮತ್ತು ನಾನು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಯಾಗಿದ್ದ ಕಾರಣ ಕ್ಷೇತ್ರದ ಕಡೆಗೆ ಗಮನ ನೀಡಲಾಗದೆ ಕಳೆದ ಬಾರಿ ಹೀನಾಯವಾಗಿ ಸೋತಿದ್ದೇನೆ. ಕಳೆದ ಬಾರಿಯೆ ಯುವಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದೆ. ಆದರೆ ಮುಂದಿನ ಬಾರಿ ನಾನು ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದರು.
ಬಿಜೆಪಿ ಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಅವಕಾಶ ನೀಡಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಕೂಡ ಯುವಕರಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ನಾನು ಮುನ್ನುಡಿ ಹಾಕುತ್ತಿದ್ದೇನೆ ಎಂದರು.