Kasaragod: ಒಂದು ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿದ ಜೀರುಂಡೆ- ಮಗು ಸಾವು
Monday, July 12, 2021
ಕಾಸರಗೋಡು: ಒಂದು ವರ್ಷದ ಮಗುವಿನ ಗಂಟಲಲ್ಲಿ ಜೀರುಂಡೆ ಸಿಲುಕಿ ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ನುಳ್ಳಿಪ್ಪಾಡಿ ಚೆನ್ನಿಕೆರೆಯ ಸತ್ಯೇ೦ದ್ರ ಮತ್ತು ರಜಿನಿ ದಂಪತಿಗಳ ಪುತ್ರ ಅನ್ವೇದ್ ಮೃತ ಮಗು. ಶನಿವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಮಗು ಮೃತ ಪಟ್ಟಿತ್ತು. ಮಗುವಿನ ಸಾವಿಗೆ ಕಾರಣ ತಿಳಿದುಬಂದಿರಲಿಲ್ಲ ಆದ್ದರಿಂದ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಸಂದರ್ಭ ಶ್ವಾಸನಾಳದಲ್ಲಿ ಸಣ್ಣ ಜೀರುಂಡೆ ಮರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ಜೀರುಂಡೆ ಮರಿಯನ್ನು ನುಂಗಿರಬಹುದು ಎಂದು ಶಂಕಿಸಲಾಗಿದ್ದು, ಇದರಿಂದಲೇ ಮಗು ಉಸಿರುಗಟ್ಟಿ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಕಾಸರಗೋಡು ನಗರ ಠಾಣಾ ಪೊಲೀಸರು ತಪಾಸಣೆ ನಡೆಸಿದರು.