ಪ್ರೀತಿ ನಿರಾಕರಣೆ: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸೈಕೋ..!!ಮುಂದಾಗಿದ್ದು ಮಾತ್ರ ಭಯಾನಕ...
Monday, July 12, 2021
ಉತ್ತರಪ್ರದೇಶ: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ತನ್ನ ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಜೀವಂತ ಸುಡಲು ಯತ್ನಿಸಿರುವ ಘಟನೆ ಖುರ್ಜಾ ನಗರದ ಕೊತ್ವಾಲಿ ಪ್ರದೇಶದ ಮುಂಡಖೇಡಾದಲ್ಲಿ ನಡೆದಿದೆ.
ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇದು ಪ್ರೇಮ ಪ್ರಕರಣವೆಂದು ತಿಳಿದುಬಂದಿದೆ. ಕೃತ್ಯವೆಸಗಿದ ಆರೋಪಿ, ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.