Mangalore- ಬೆಳ್ತಂಗಡಿಯಲ್ಲಿ ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಲುಗೆ- ಗರ್ಭಿಣಿಯಾದ ಬಳಿಕ ವಂಚನೆ
Thursday, July 1, 2021
ಮಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ವಂಚನೆ ಮಾಡಿದ ಯುವಕನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಿರಣ್ ಬಂಧಿತ ಆರೋಪಿ. ಈತ ಯುವತಿಯೊಂದಿಗೆ ಸಲುಗೆಯಿಂದ ಇದ್ದು, ಹುಡುಗಿಯ ಮನೆಗೆ ಹೋಗಿ ಬರುತ್ತಿದ್ದ. ಇವರಿಬ್ಬರ ನಡುವೆ ಸಲುಗೆ ಬೆಳೆದು ಆತ ಆಕೆಗೆ ಮದುವೆಯಾಗುವುದಾಗಿಯೂ ನಂಬಿಸಿದ್ದನು. ಯುವತಿಯ ಆಕ್ಷೇಪದ ನಡುವೆ ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ . ಇದೀಗ ಯುವತಿ ಏಳೂವರೆ ತಿಂಗಳ ಗರ್ಭಿಣಿಯಾಗಿದ್ದು ಮದುವೆಯಾಗದೆ ವಂಚನೆ ಮಾಡಿದ ಕಿರಣ್ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕಿರಣ್ ನನ್ನು ಬಂಧಿಸಿದ್ದಾರೆ.