ಮಥುರಾ ಜಿಲ್ಲೆಯ ಮಂತ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಬೇಕಾಗಿತ್ತು. ಈ ವೇಳೆ ಆಕೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾಳೆ. ತನಿಗೆ ವರ ಇಷ್ಟವಿಲ್ಲ ಎಂದಿದ್ದಾಳೆ. ಯಾವುದೇ ಕಾರಣಕ್ಕೂ ಆತನೊಂದಿಗೆ ಮದುವೆ ಮಾಡಿಕೊಳ್ಳುವುದಿಲ್ಲ ಎಂದಿದ್ದಾಳೆ. ಎರಡು ಕುಟುಂಬಗಳ ಮಧ್ಯೆ ಜಗಳ ನಡೆದಿದೆ. ಈ ವಳೆ ಪಂಚಾಯ್ತಿ ನಡೆಸಲಾಗಿದ್ದು, ವರ ಮಾಧವ್ ಅದೇ ಗ್ರಾಮದಲ್ಲಿ ವಾಸವಾಗಿದ್ದ ಶಿವಾಣಿ ಜೊತೆ ಮದುವೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.