ಲಿವ್ ಇನ್ ರಿಲೇಶನ್ ಶಿಪ್ನಲ್ಲಿದ್ದ ಯುವತಿಗೆ ಬೆಂಕಿ ಹಚ್ಚಿ ಕೊಂದ ಟೆಕ್ಕಿ...
Friday, July 30, 2021
ಬೆರ್ಹಾಂಪುರ್(ಒಡಿಶಾ): ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ
ತನ್ನೊಡನೆ ವಾಸಿಸುತ್ತಿದ್ದ 24 ವರ್ಷದ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಜೊತೆ ಜಗಳ ಮಾಡಿ ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಒಡಿಶಾದ ಪ್ರತಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಳೆದ ಕೆಲವು ತಿಂಗಳಿಂದ ಇವರಿಬ್ಬರ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ಇದ್ದರು. ಇಬ್ಬರ ನಡುವೆ ದೈಹಿಕ ಸಂಪರ್ಕವೂ ಇತ್ತು ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಯುವತಿಯನ್ನು ತಕ್ಷಣವೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.