ಶ್ಯಾಮಸುಂದರ ತಂಗಿಯನ್ನು ಕೊಲೆ ಮಾಡಿರುವ ಆರೋಪಿ. ಚಂದ್ರಕಲಾ (22) ಕೊಲೆಯಾದ ಯುವತಿ. ಕೊಲೆಯಾದ ಚಂದ್ರಕಲಾಗೆ ಮಾನವಿ ತಾಲೂಕಿನ ಮದ್ಲಾಪುರ ಗ್ರಾಮದ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಚಂದ್ರಕಲಾ ಹುಡುಗ ಕಪ್ಪಗಿದ್ದಾನೆ ಎನ್ನುವ ಕಾರಣಕ್ಕೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಳು.
ಇದರಿಂದ ಕೋಪಗೊಂಡ ಅಣ್ಣ ಶ್ಯಾಮಸುಂದರ ಕೊಡಲಿಯಿಂದ ಕೊಚ್ಚಿ ತಂಗಿಯನ್ನು ಕೊಂದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.