ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ...
Saturday, July 24, 2021
ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ಕೊಂದು ಬಿಸಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
13 ವರ್ಷದ ಬಾಲಕಿ ಶವ ಜಮೀನೊಂದರಲ್ಲಿ ವಿವಸ್ತ್ರವಾಗಿ ಪತ್ತೆಯಾಗಿದೆ. ಸ್ಥಳದಲ್ಲೇ ವ್ಯಕ್ತಿಯೊಬ್ಬನ ಚಪ್ಪಲಿಯೂ ಸಿಕ್ಕಿದೆ.ಈ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರವೆಸಗಿದ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ, ಎಸ್ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.