-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬ್ರಹ್ಮಾವರ: ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಕುತ್ತಿಗೆಯನ್ನು ವಯರ್ ನಿಂದ ಬಿಗಿದು ಭೀಕರ ಕೊಲೆ.!

ಬ್ರಹ್ಮಾವರ: ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಕುತ್ತಿಗೆಯನ್ನು ವಯರ್ ನಿಂದ ಬಿಗಿದು ಭೀಕರ ಕೊಲೆ.!

 
ಬ್ರಹ್ಮಾವರ: ಬ್ರಹ್ಮಾವರ ಸಮೀಪದ ಅಪಾರ್ಟ್ಮೆಂಟ್ ವೊಂದರಲ್ಲಿ ಮಹಿಳೆಯೋರ್ವಳನ್ನು ಭೀಕರವಾಗಿ ಕೊಲೆಗೈದ ಘಟನೆ ಸೋಮವಾರ ಬೆಳಕಿಗೆ ಬಂದಿದೆ‌. 

ಗಂಗೊಳ್ಳಿ ಮೂಲದ ವಿಶಾಲ ಗಾಣಿಗ(35) ಕೊಲೆಯಾದ ಯುವತಿ.  ಈಕೆ ಗಂಡನೊಂದಿಗೆ ವಿದೇಶದಲ್ಲಿ ವಾಸವಾಗಿದ್ದಳು. ಕೆಲವು ದಿನಗಳ ಹಿಂದೆಯಷ್ಟೇ ಊರಿಗೆ ಆಗಮಿಸಿದ್ದಳು. ತನಗೆ ಬ್ಯಾಂಕ್ ನಲ್ಲಿ ಕೆಲಸವಿದೆ ಕೆಲಸ ಮುಗಿಸಿ ಗಂಗೊಳ್ಳಿ ಮನೆಗೆ ಬರುವೆ ಎಂದು ತಿಳಿಸಿ ರಿಕ್ಷಾ ಏರಿ ಬ್ರಹ್ಮಾವರಕ್ಕೆ ತೆರಳಿದ್ದಾಳೆ. ಆದರೆ, ಸಂಜೆಯಾದರೂ ಮಗಳು ಮನೆಗೆ ಬಾರದ ಕಾರಣ ಹಾಗೂ ಪೋನ್ ಕೂಡ ರಿಸೀವ್ ಮಾಡದಿರುವುದರಿಂದ ಭಯಗೊಂಡು ತನ್ನ ಇನ್ನೋರ್ವ ಮಗಳೊಂದಿಗೆ ವಿಶಾಲ ಅವರನ್ನು ಹುಡುಕಿಕೊಂಡು ಬ್ರಹ್ಮಾವರಕ್ಕೆ ಬಂದಿದ್ದಾರೆ. 

ಈ ಸಂದರ್ಭದಲ್ಲಿ ಮಗಳು ಅಪಾರ್ಟ್ಮೆಂಟ್ ನ ರೂಮ್ ನಲ್ಲಿ ಕುತ್ತಿಗೆಗೆ ವಯರ್ ಬಿಗಿದ ಸ್ಥಿತಿಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.  ವಿಶಾಲ ಅವರು ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಘಟನೆ ನಡೆದಿದೆ ಎನ್ನಲಾಗಿದ್ದು, ಚಿನ್ನಾಭರಣಕ್ಕಾಗಿ ಕೊಲೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99