
ಪತ್ನಿಯ ಮೇಲೆ ಅನುಮಾನ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪತಿ!
Sunday, July 11, 2021
ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ನಡೆದಿದೆ.
ಮೈರುನ್ನೀಸಾ ಸೈಫ ಅಲಿ (31) ಕೊಲೆಯಾಗಿದ್ದಾರೆ. ಪತಿ ಸೈಫ್ ಅಲಿ, ಪತ್ನಿಯ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ. ಶುಕ್ರವಾರ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ನಂತರ ಆಕೆಯ ತಲೆಯಮೇಲೆ ಕಲ್ಲು ಎತ್ತಿಹಾಕಿ ಹಾಕಿದಾಗ ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡಿದ್ದ ಮೈರುನ್ನೀಸಾ ಅವರನ್ನು ಕಿಮ್ಸ್ ಗೆ ದಾಖಲಿಸಲಾಗುತ್ತು. ಚಿಕಿತ್ಸೆ ಫಲಿಸದೆ ರವಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.