ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಬಾಂಗ್ಲಾದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರತ್ಯೇಕ ತನಿಖೆ ಕೈಗೊಂಡ ಎನ್‌ಐಎ..

 
ಬೆಂಗಳೂರು:  ಬಾಂಗ್ಲಾದೇಶದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎನ್‌ಐಎ ಪ್ರತ್ಯೇಕ ಎಫ್​​ಐಆರ್ ದಾಖಲಿಸಿಕೊಂಡಿದೆ. 

 ರಾಮಮೂರ್ತಿನಗರದಲ್ಲಿ ಮೇ 27ರಂದು ಬಾಂಗ್ಲಾ ಯುವತಿಯ ಮೇಲೆ ನಡೆದ ಗ್ಯಾಂಗ್‌ ರೇಪ್ ಪ್ರಕರಣದಲ್ಲಿ  ಪೊಲೀಸರು 13 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ವೇಳೆ ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಾಣೆ ಕೃತ್ಯ ಬೆಳಕಿಗೆ ಬಂದಿತ್ತು. 

ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸೋಮವಾರ ಎನ್‌ಐಎ ಅಧಿಕಾರಿಗಳು, 13 ಮಂದಿ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ. ಅಕ್ರಮ ಬಾಂಗ್ಲಾದೇಶಿಗರ ಪತ್ತೆ ಮತ್ತು ಮಾನವ ಕಳ್ಳ ಸಾಗಾಣೆ ಕುರಿತು ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. 
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW