
ತಾನು ಪ್ರೀತಿಸಿದ ಹುಡುಗನೊಂದಿಗೆ ತಿಂಗಳ ಹಿಂದಷ್ಟೇ ಮದುವೆಯಾದ ಮಹಿಳಾ ಪೇದೆ ಆತ್ಮಹತ್ಯೆ...
Wednesday, July 28, 2021
ನೆಲಮಂಗಲ: ತಿಂಗಳ ಹಿಂದಷ್ಟೇ ತಾನು ಪ್ರೀತಿಸಿದ ಹುಡುಗನೊಂದಿಗೆ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಂಡನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.
ತುಮಕೂರಿನ ನಾಯಕನಪಾಳ್ಯ ಮೂಲದ ನೇತ್ರಾ(27) ಮೃತ ದುರ್ದೈವಿ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದ ನೇತ್ರಾಗೆ, ಪೀಣ್ಯಾ ಸಂಚಾರಿ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಜತೆ ಕಳೆದ ತಿಂಗಳು ಮದುವೆ ಆಗಿತ್ತು. ಇವರಿಬ್ಬರೂ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಅಡುಗೆ ಮಾಡುವ ವಿಚಾರಕ್ಕೆ ಗಂಡನ ಮೇಲೆ ಬೇಸರಗೊಂಡ ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪತಿ ಮಂಜುನಾಥ್ನನ್ನು ವಶಕ್ಕೆ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.