ಅಶ್ಲೀಲ ಸಿನಿಮಾ ಶೂಟಿಂಗ್- ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅಂದರ್!
Tuesday, July 20, 2021
ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್ಗಳಲ್ಲಿ ಪ್ರಕಟಿಸುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ರಾಜ್ ಕುಂದ್ರಾರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ ಕುಂದ್ರಾ ಅರೆಸ್ಟ್ ಆದ ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಕರೆತರಲಾಗಿದೆ.