ಶಿಲ್ಪಾ ಶೆಟ್ಟಿ ಜೊತೆ ನನ್ನ ಸಂಬಂಧ ಸರಿಯಿಲ್ಲ ಎಂದು ನನಗೆ ಕಿಸ್ ಮಾಡಲು ಬಂದರು: ರಾಜ್ ಕುಂದ್ರಾ ವಿರುದ್ಧ ನಟಿಯ ಆರೋಪ
Thursday, July 29, 2021
ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶೆರ್ಲಿನ್ ಛೋಪ್ರಾ ಲೈಂಗಿಕ ದೌರ್ಜನ್ಯ ಕೇಸ್ ದಾಖಲು ಮಾಡಿದ್ದಾರೆ.
ನಟಿ ಶೆರ್ಲೀನ್, ಕುಂದ್ರಾ ತಮ್ಮ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕುಂದ್ರಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚಿತ್ರವೊಂದಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ನನ್ನ ಜತೆ ಮಾತನಾಡಿದ್ದರು, ಹೀಗೆ ನಮ್ಮಿಬ್ಬರ ಪರಿಚಯವಾಗಿತ್ತು. ಅದಾದ ಮೇಲೆ ಕುಂದ್ರಾ ನನ್ನ ಮನೆಗೆ ಬರಲು ಶುರು ಮಾಡಿದರು. ‘ನಾನು ಬೇಡ ಎಂದು ವಿರೋಧಿಸಿದರೂ ಕೂಡ ರಾಜ್ ಕುಂದ್ರಾ ಬಲವಂತವಾಗಿ ಕಿಸ್ ಮಾಡಲು ಬಂದರು. ನನಗೆ ಭಯವಾಯಿತು. ಇದನ್ನೆಲ್ಲ ನಿಲ್ಲಿಸುವಂತೆ ಕೇಳಿಕೊಂಡೆ. ನಂತರ ಅವರನ್ನು ತಳ್ಳಿ ಎಸ್ಕೇಪ್ ಆದೆ. ಶೌಚಾಲಯಕ್ಕೆ ತೆರಳಿ ಅಡಗಿಕೊಂಡೆ’ ಎಂದು ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ‘ಶಿಲ್ಪಾ ಶೆಟ್ಟಿ ಜೊತೆ ನನ್ನ ಸಂಬಂಧ ಸರಿಯಿಲ್ಲ. ಹಾಗಾಗಿ ನಾನು ಸದಾ ಒತ್ತಡದಲ್ಲಿ ಇರುತ್ತೇನೆ’ ಎಂದು ಶರ್ಲಿನ್ ಬಳಿ ರಾಜ್ ಕುಂದ್ರಾ ಹೇಳಿಕೊಂಡಿದ್ದರು ಎಂದು ಕುಂದ್ರಾ ವಿರುದ್ಧ ನಟಿ ದೂರಿನಲ್ಲಿ ಹೇಳಿದ್ದಾರೆ.