-->

ಸಹಾಯ ಮಾಡುವ ನೆಪದಲ್ಲಿ ಬಂದು ಅತ್ಯಾಚಾರ- ಮೊಬೈಲ್ನಲ್ಲಿ ಸೆರೆಯಾಗಿತ್ತು ಈತನ ನೀಚ ಕೃತ್ಯ...

ಸಹಾಯ ಮಾಡುವ ನೆಪದಲ್ಲಿ ಬಂದು ಅತ್ಯಾಚಾರ- ಮೊಬೈಲ್ನಲ್ಲಿ ಸೆರೆಯಾಗಿತ್ತು ಈತನ ನೀಚ ಕೃತ್ಯ...

ಬೆಳಗಾವಿ: ಸಹಾಯ ಮಾಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಗೋಕಾಕ್​ ನಗರದಲ್ಲಿ ಬೆಳಕಿಗೆ ಬಂದಿದೆ.ಅತ್ಯಾಚಾರ ಎಸಗಿದ ದೃಶ್ಯವನ್ನು ವಿಡಿಯೋ ಮಾಡಿಕೊಂಡು ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 ಗೋಕಾಕ್ ತಾಲೂಕಿನ ತಪಸಿ ಗ್ರಾಮದ ಬಾಳಪ್ಪ ನಾಯಿಕ ಬಂಧಿತ ವ್ಯಕ್ತಿ.ಬಾಳಪ್ಪ ನಾಯಿಕ ನೊಂದ ಮಹಿಳೆಯಗೆ ಪರಿಚಿತನಾಗಿದ್ದ.ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮನೆಗೆ ತೆರಳಿದ ಆರೋಪಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಈ ಬಗ್ಗೆ ಸಾಕ್ಷ್ಯಸಮೇತ ದೂರು ನೀಡಲು ಮಹಿಳೆ ಮನೆಯಲ್ಲಿ ಮೊಬೈಲ್ ಕ್ಯಾಮೆರಾ ಆನ್ ಮಾಡಿ ಇಟ್ಟಿದ್ದರು. ಜೂನ್ 7 ರಂದು ಮನೆಗೆ ಆಗಮಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿ, ಅತ್ಯಾಚಾರ ಎಸಗಿದ್ದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಬಳಿಕ ಮಹಿಳೆ ಗೋಕಾಕ್​ ನಗರ ಠಾಣೆಗೆ ದೂರು ನೀಡಿದ್ದಳು. 

ಈ ದೂರಿನ ಮೇರೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಈಗ ಆರೋಪಿ ಬಂಧನದಲ್ಲಿದ್ದಾನೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99