ಜೀ ಕನ್ನಡದ 'ಜೊತೆ ಜೊತೆಯಲ್ಲಿ' ದಾರವಾಹಿಯಿಂದ ಹೊರಬಂದ ನಟಿ ಮೇಘ ಶೆಟ್ಟಿ..
Saturday, July 10, 2021
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆ ಜೊತೆಯಲಿ' ಧಾರವಾಹಿಯಿಂದ ನಾಯಕಿ ಮೇಘಾ ಶೆಟ್ಟಿ ಹೊರಬಂದಿದ್ದಾರೆ.
ಮೇಘಾ ಈಗಾಗಲೇ ತಮ್ಮ ಕೊನೆಯ ದಿನದ ಶೂಟಿಂಗ್ ಮುಗಿಸಿದ್ದು, ಮುಂದಿನ ದಿನಗಳಲ್ಲಿ ಧಾರವಾಹಿಯಲ್ಲಿ ಅನು ಸಿರಿಮನೆಯಾಗಿ ಕಾಣಿಸಿಕೊಳ್ಳಲ್ಲ ಎನ್ನಲಾಗಿದೆ. ಮೇಘಾ ಹೊರಹೋಗುತ್ತಿರುವ ಸುದ್ದಿ ತಿಳಿದು ಅವರ ಅಭಿಮಾನಿ ವರ್ಗ ತೀವ್ರ ಬೇಸರ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಮೇಘಾನೇ ಅನು ಸಿರಿಮನೆಯಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ. ಸೀರಿಯಲ್ ಬಿಡಲು ಕಾರಣ ಇನ್ನೂ ತಿಳಿದುಬಂದಿಲ್ಲ.