ಒಲಿಂಪಿಕ್ ಗೆ ಅರ್ಹತೆ ಪಡೆದರು ಭಾರತದ ಮೊದಲ ಈಜುಗಾರ್ತಿ...
Friday, July 2, 2021
ಹೊಸದಿಲ್ಲಿ: ಟೋಕಿಯೋ ಒಲಿಂಪಿಕ್ಸ್ ಗೆ ಸ್ಥಾನ ಪಡೆದ ಭಾರತದ ಮೊದಲ ಮಹಿಳಾ ಈಜುಪಟು ಎಂದು ಮಾನಾ ಪಟೇಲ್ ಯುನಿವರ್ಸಾಲಿಟಿ ಕೋಟಾದಡಿಯಲ್ಲಿ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಈಜುಪಟುಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಈ ಕುರಿತಾಗಿ ಟ್ವಿಟ್ ಮಾಡಿದ್ದು, ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಮಹಿಳಾ ಮತ್ತು 3ನೇ ಭಾರತೀಯ ಈಜುಗಾರ್ತಿ ಮಾನಾ ಪಟೇಲ್ಗೆ ಶುಭಾಶಯ ಎಂದು ಹೇಳಿದ್ದಾರೆ.
200 ಮೀಟರ್ ಬಟರ್‌ಪ್ಲೈ ವಿಭಾಗದಲ್ಲಿ ಸಾಜನ್ ಪ್ರಕಾಶ್ ನೇರ ಅರ್ಹತೆ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ನಂತರ ಶ್ರೀಹರಿ ನಟರಾಜ್ ಅವರೂ ಅರ್ಹತೆ ಸಾಧಿಸಿದ್ದರು. ಇದೀಗ ಮಾನಾ ಪಟೇಲ್ ಅವರೂ ಕೂಡ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ.