-->

SSLC ಪರೀಕ್ಷೆ ರದ್ದುಪಡಿಸಲು ಆಗ್ರಹ;  ನ್ಯಾಯಾಲಯದ ಮೆಟ್ಟಿಲು ಏರಿದ ಅರ್ಜಿದಾರ!

SSLC ಪರೀಕ್ಷೆ ರದ್ದುಪಡಿಸಲು ಆಗ್ರಹ; ನ್ಯಾಯಾಲಯದ ಮೆಟ್ಟಿಲು ಏರಿದ ಅರ್ಜಿದಾರ!

ಬೆಂಗಳೂರು: ಪಿಯು ಪರೀಕ್ಷೆಯಂತೆ ಎಸೆಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್‍ಗೆ ಪಿಐಎಲ್ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. 
ಅರ್ಜಿದಾರ ಎಸ್.ವಿ.ಸಿಂಗ್ರೇಗೌಡ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಸಕ್ತ ಸಾಲಿನ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದಂತೆಯೇ ರಿಪೀಟರ್ಸ್ ಗಳನ್ನೂ ಪರೀಕ್ಷೆ ಇಲ್ಲದೆ ಪಾಸು ಮಾಡಬೇಕು ಎಂದು ಕೋರಿ ಈ ಮೊದಲು ಪಿಐಎಲ್ ಸಲ್ಲಿಸಿತ್ತು.  ಅರ್ಜಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಎಸೆಸೆಲ್ಸಿ ಬೋರ್ಡ್ ನಿರ್ದೇಶಕರನ್ನು ಪ್ರತಿವಾದಿಯಾಗಿಸಲಾಗಿದೆ.  

ಎಸೆಸೆಲ್ಸಿ ಪರೀಕ್ಷೆ ನಡೆಸಲು ಕಳೆದ ಫೆ.5ರಂದು ನೋಟಿಫಿಕೇಷನ್ ಹೊರಡಿಸಿದ್ದು, ಜುಲೈ 19ರಿಂದ 22ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಜೂನ್ 28ರಂದು ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಸರಿಯಾಗಿ ತರಗತಿಗಳೂ ನಡೆದಿರಲಿಲ್ಲ. ಅದರಲ್ಲೂ ಇಂಟರ್ ನೆಟ್, ಸ್ಮಾರ್ಟ್ ಫೋನ್ ಇಲ್ಲದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್ ಲೈನ್ ಮೂಲಕವೂ ಕಲಿಯಲು ಸಾಧ್ಯವಾಗಿಲ್ಲ. ಇನ್ನೇನು ಕೋವಿಡ್ 3ನೇ ಅಲೆ ಅಪ್ಪಳಿಸಲಿದ್ದು, 1 ರಿಂದ 15ನೇ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲುವ ಪ್ರಮಾಣ ಹೆಚ್ಚಿದೆ ಎಂದು ತಜ್ಞರು ತಿಳಿಸಿದ್ದಾರೆ. ಪ್ರಸಕ್ತ ವರ್ಷ ರಿಪೀಟರ್ಸ್ ಸೇರಿದಂತೆ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸಿದರೆ ಮಕ್ಕಳು ಸಮಸ್ಯೆಗೆ ಸಿಲುಕಲಿದ್ದಾರೆ. 

ಈಗಾಗಲೇ ಸಿಬಿಎಸ್‍ಸಿ 10ನೇ ತರಗತಿ ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣಕ್ಕಾಗಿಯೇ ಪರೀಕ್ಷೆ ರದ್ದುಪಡಿಸಿ ಆದೇಶಿಸಲಾಗಿದೆ. ರಾಜ್ಯದಲ್ಲಿಯೂ ಪಿಯು ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅಂತೆಯೇ, ಎಸೆಸೆಲ್ಸಿ ಪರೀಕ್ಷೆ ನಡೆಸದಂತೆ ಸರಕಾರ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು. ಮತ್ತು ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿರುವ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.    

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99