ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಆತ್ಮಹತ್ಯೆಗೆ ಶರಣು..!! ಕಾರಣ..??
Thursday, July 22, 2021
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರ ಮೃತದೇಹ ಕೊಚ್ಚಿಯಲ್ಲಿರುವ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿಯು ಹೌದು. ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಕಳೆದ ವರ್ಷ್ ಜೂನ್ ತಿಂಗಳಲ್ಲಿ ಆರು ಬಾರಿ ಲಿಂಗ ಪುನರ್ವಿತರಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆ ನೀಡಿದ್ದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ಅನನ್ಯ ಕುಮಾರಿ ಅನೇಕ ಆರೋಪಗಳನ್ನು ಮಾಡಿದ್ದರು. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿದೆ. ಇದಕ್ಕೆಲ್ಲ ಕಾರಣ ಆಸ್ಪತ್ರೆಯವರು ಎಂದು ಆರೋಪಿಸಿ ಪರಿಹಾರ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.