ಕೆಎಎಸ್ ಪರೀಕ್ಷೆ ಪಾಸ್ ಆಗಿಲ್ಲ ಎಂದು ಅಸಿಸ್ಟೆಂಟ್ ಪ್ರೊಫೆಸರ್ ಸೂಸೈಡ್..
Monday, July 26, 2021
ನೆಲಮಂಗಲ: ಕೆಎಎಸ್ ಪರೀಕ್ಷೆಯಲ್ಲಿ ಫೇಲ್ ಆದ ಕಾರಣ, ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ತೀವ್ರ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್. ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎಂಎ ಪದವೀಧರೆ ಆಗಿರುವ ಇವರು ಕಾಲೇಜೊಂದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ, ಆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.