'ನಾ ನಿನ್ನ ಬಿಟ್ಟಿರಲಾರೆ' ಎಂದು ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು...
Sunday, July 4, 2021
ಮಂಡ್ಯ: ಬೇರೆ-ಬೇರೆ ಮನೆಗೆ ಮದುವೆ ಮಾಡಲು ಮುಂದಾದ ಪೋಷಕರ ನಿರ್ಧಾರದಿಂದ ಮನನೊಂದು ಅವಳಿ ಸಹೋದರಿಯರು ನೇಣಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ..
ಸುರೇಶ್ ಮತ್ತು ಯಶೋಧ ದಂಪತಿಯ ಅವಳಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯ (19) ಮೃತ ದುರ್ದೈವಿಗಳು. ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಸಿದ್ಧತೆ ಮಾಡಿಕೊಂಡಿದ್ದರು. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.