ಶೃತಿ (28) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ರಾತ್ರಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಎದುರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಏಕಾಏಕಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿ ಮಾಡಿಕೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.