
ಅಪ್ರಾಪ್ತೆ ಮೇಲೆ ಅತ್ಯಾಚಾರ ವೆಸಗಿದ ಮಾಜಿ ಶಾಸಕನಿಗೆ 25 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್...
Thursday, August 26, 2021
ಶಿಲ್ಲಾಂಗ್ (ಮೇಘಾಲಯ) : 2017ರಲ್ಲಿ ಜೂಲಿಯಸ್ ಮಾವತಿ ಶಾಸಕರಾಗಿದ್ದ ವೇಳೆ 14 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದರು. ತದನಂತರ ಅವರನ್ನ ಗುವಾಹಟಿಯಲ್ಲಿ ಪತ್ತೆ ಮಾಡಿ ಬಂಧಿಸಲಾಗಿತ್ತು. ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿ ಅಪರಾಧಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ 15 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಕಾಮುಕನನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದೇ ಪ್ರಕರಣದಲ್ಲಿ ಕೋರ್ಟ್, ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮುಂದಿನ ವಾರ ಮೇಘಾಲಯ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಡೋರ್ಫಾಂಗ್ ಪರ ವಕೀಲ ಕಿಶೋರ್ ಚಿ ಗೌತಮ್ ಅವರು ಹೇಳಿದ್ದಾರೆ.