ಕೇವಲ 8,999 ರೂ.ಗೆ ನೋಕಿಯಾದಿಂದ C20 ಪ್ಲಸ್ ಸ್ಮಾರ್ಟ್ ಫೋನ್
Wednesday, August 11, 2021
ನವದೆಹಲಿ: ನೋಕಿಯಾ ಮೊಬೈಲ್ ಫೋನ್ ಕಂಪೆನಿಯು ಹಲವು ಆಕರ್ಷಕ ಸ್ಮಾರ್ಟ್‌ಫೋನ್ ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಸದ್ಯ ನೋಕಿಯಾ C20 ಪ್ಲಸ್ ಸ್ಮಾರ್ಟ್ ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಜೊತೆಗೆ, ಆಕ್ಟಾ-ಕೋರ್ ಎಸ್ಒಸಿ ಪ್ರೊಸೆಸರ್ ಬಲವನ್ನು ಪಡೆದುಕೊಂಡಿರುವ ಈ ಫೋನ್ ಅತಿ ಕಡಿಮೆ ಬೆಲೆಗೆ ದೊರೆಯಲಿದೆ.
ಒಟ್ಟು ಎರಡು ಮೋಡೆಲ್ ಅನ್ನು ಬಿಡುಗಡೆ ಮಾಡಲಾಗಿದ್ದು, ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್, 2ಜಿಬಿ ರ್ಯಾಮ್ ಮತ್ತು 32ಜಿಬಿ ಸ್ಟೋರೇಜ್ ಗೆ 8,999 ರೂ. ಮಾರುಕಟ್ಟೆ ಬೆಲೆಯಿದೆ. ಅಂತೆಯೆ 3ಜಿಬಿ ರ್ಯಾಮ್ ಮತ್ತು 32ಜಿಬಿ ಸ್ಟೋರೇಜ್ ಆಯ್ಕೆಯ ಬೆಲೆ 9,999 ರೂ. ಆಗಿದೆ.
ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 81.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಯುನಿಸೋಕ್ SC9863a SoC ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಈ ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ, 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆಟಪ್ ಹೊಂದಿದೆ.
ವಿಶೇಷವಾಗಿ ಈ ಸ್ಮಾರ್ಟ್‌ಫೋನ್ 4,950mAh ಬ್ಯಾಟರಿಯನ್ನು ಒದಗಿಸಿದ್ದು ಅದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಬಳಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v4.2, FM ರೇಡಿಯೋ ಸೇರಿದಂತೆ ಬೇಸಕ್ ಆಯ್ಕೆಗಳಿವೆ.