
ನಾಳೆಯಿಂದಲೆ (ಆಗಷ್ಟ್ 7) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕೇರಳ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ
Friday, August 6, 2021
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕೇರಳ ಮತ್ತು ಮಹಾರಾಷ್ಟ್ರ
ರಾಜ್ಯದ ಗಡಿಯಲ್ಲಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂವನ್ನು ಮಾಡಲಾಗುವುದು ಎಂದು
ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ
ಅವರು ರಾಜ್ಯದ ಇತರೆಡೆ ಗಳಲ್ಲಿ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಇರಲಿದೆ. ಇದರ ಜೊತೆಗೆ ಕೇರಳ
ಮತ್ತು ಮಹಾರಾಷ್ಟ್ರ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಇರಲಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ
ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ