-->

ಪತ್ರಕರ್ತ ಇಮ್ತಿಯಾಝ್ ಶಾ ಅವರಿಗೆ "ಡಿಜಿಟಲ್  ಮೀಡಿಯಾ"  ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಪ್ರದಾನ ( Full video )

ಪತ್ರಕರ್ತ ಇಮ್ತಿಯಾಝ್ ಶಾ ಅವರಿಗೆ "ಡಿಜಿಟಲ್ ಮೀಡಿಯಾ" ಬಿ ಜಿ ಮೋಹನ್ ದಾಸ್ ಪ್ರಶಸ್ತಿ ಪ್ರದಾನ ( Full video )


ಬಂಟ್ವಾಳ:  ಅತ್ಯುತ್ತಮ ಡಿಜಿಟಲ್ ಮಾಧ್ಯಮದ ವರದಿಗಾಗಿ ನೀಡಲಾಗುವ ಪ್ರತಿಷ್ಠಿತ ಬಿ.ಜಿ.ಮೋಹನದಾಸ ಪ್ರಶಸ್ತಿಯನ್ನು ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು.




ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಜಂಟಿ ಆಯೋಜನೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ  ಈ ಪ್ರಶಸ್ತಿ ನೀಡಲಾಯಿತು.
ಕನ್ನಡದ ಮೊದಲ ಡಿಜಿಟಲ್‌ ಮೀಡಿಯಾ ಸಂಸ್ಥೆಯ ಸಂಸ್ಥಾಪಕ,
ಹಿರಿಯ ಪತ್ರಕರ್ತ ಬಿ.ಜಿ.ಮೋಹನದಾಸ್ ನೆನಪಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮಾಧ್ಯಮ ಅಕಾಡೆಮಿಯಿಂದ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿರುವುದಾಗಿ ತಿಳಿಸಿದರು. 
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ, ಡಿಜಿಟಲ್ ಮಾಧ್ಯಮ ವೇಗದಿಂದ ಬೆಳೆಯುತ್ತಿದ್ದು, ಇದಕ್ಕೊಂದು ಸ್ಪಷ್ಟ ನೀತಿಯನ್ನು ಸರ್ಕಾರ ರೂಪಿಸಿದ ಬಳಿಕ ಸಂಘದ ಸದಸ್ಯತ್ವವನ್ನು ಡಿಜಿಟಲ್ ಪತ್ರಕರ್ತರಿಗೂ ಒದಗಿಸುವ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂದರು.

ಸೇವಾಂಜಲಿ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ ಮಾತನಾಡಿ, ನಿರತ ಸಾಹಿತ್ಯ ಸಂಪದ ರಚನಾತ್ಮಕ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಕಸಾಪ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಕೆ. ಮೋಹನ ರಾವ್ ಮಾತನಾಡಿ, ಯುವಕರನ್ನು ಗುರುತಿಸಿ ಪ್ರಶಸ್ತಿ ನೀಡುವುದು ಉತ್ತಮ ಬೆಳವಣಿಗೆ ಎಂದರು.

ಬಿ.ಜಿ.ಮೋಹನದಾಸ್ ಅವರ ಬದುಕಿನ ದಾರಿಯನ್ನು ಸಹೋದರ ಲಕ್ಷ್ಮೀಕಾಂತ್ ಸ್ಮರಿಸಿದರು. 
ಅಧ್ಯಕ್ಷತೆಯನ್ನು ನಿರತ ಸಾಹಿತ್ಯ ಸಂಪದ ಗೌರವಾಧ್ಯಕ್ಷ ವಿ.ಸು.ಭಟ್ ವಹಿಸಿದ್ದು, 25 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ನಿರತ ವತಿಯಿಂದ ಹಲವು ಸಾಹಿತ್ಯಿಕ ಚಟುವಟಿಕೆಗಳನ್ನು ಆಯೋಜಿಸಿರುವುದಾಗಿ ಹೇಳಿದರು. 
ಹಿರಿಯ ಪತ್ರಕರ್ತ, ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಬಿ.ಜಿ.ಮೋಹನದಾಸ್ ಪತ್ನಿಯಶೋಧ, ಪುತ್ರಿ ಯಶಸ್ವಿ, ಸಹೋದರಿ ಮೀನಾಕ್ಷಿ ಉಪಸ್ಥಿತರಿದ್ದರು. ನಿರತ ಸಾಹಿತ್ಯ ಸಂಪದ ಅಧ್ಯಕ್ಷ ಬೃಜೇಶ್ ಅಂಚನ್ ಸ್ವಾಗತಿಸಿದರು. ಕರುಣಾಕರ ಮಾರಿಪಳ್ಳ ವಂದಿಸಿದರು. ಬಿ.ಎಂ. ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99