ಮೃತ ಯುವತಿಯನ್ನು ಚಂದ್ರಗುತ್ತಿ ಗ್ರಾಮದ ಸುಚಿತ್ರಾ (17) ಎಂದು ಗುರುತಿಸಲಾಗಿದೆ.ಈಕೆ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಸುಚಿತ್ರಾರಿಗೆ ಕೆಲವು ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.
ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸುಚಿತ್ರಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೇ ಇರುವುದರಿಂದ ಹೊಟ್ಟೆನೋವು ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.