ಶನಿವಾರ ವಿಮಾನ ಹಾರಾಟದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ನಂತರ ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು. ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇಬ್ಬರ ಆರೋಗ್ಯ ಉತ್ತಮವಾಗಿದೆ. ತಾಯಿ-ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್ ಟ್ವೀಟ್ ಮಾಡಿದ್ದಾರೆ.