
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಪೇದೆ ಬಂಧನ: ಕರ್ತವ್ಯದಿಂದ ಅಮಾನತು
ಥಾಣೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿ ಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ಮತ್ತು ಆರೋಪಿ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದು, ಕೆಲ ದಿನಗಳಿಂದ ಆರೋಪಿ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಆಗಸ್ಟ್ 19 ರಂದು ಮತ್ತೆ ಕಿರುಕುಳ ನೀಡಿದ್ದು,ಈ ಸಂಬಂಧ ಬಾಲಕಿಯ ತಾಯಿ ಪೊಲೀಸ್ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೆಕ್ಷನ್ 354 ಮತ್ತು ಪೊಕ್ಸೊ ಪ್ರಕರಣದಡಿಯಲ್ಲಿ ಪೊಲೀಸರು ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.