ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್...!!ಹೊರಬಿತ್ತು ಮತ್ತೊಂದು ಆಘಾತಕಾರಿ ಮಾಹಿತಿ...
Thursday, August 26, 2021
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ
ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಉತ್ತರ ಭಾರತ ಮೂಲದ ಯುವತಿ ಮೈಸೂರು ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಆ.24ರಂದು ಚಾಮುಂಡಿಬೆಟ್ಟದ ತಪ್ಪಲಿನ
ವಾಟರ್ ಟ್ಯಾಂಕ್ನ ಗುಡ್ಡದ ಬಳಿ ಸ್ನೇಹಿತನೊಂದಿಗೆ ಬಂದಿದ್ದಳು. ಅವರಿಬ್ಬರೂ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಅಲ್ಲಿಗೆ ಬಂದ ಐವರು ಕಾಮುಕರ ತಂಡ ಆ ದೃಶ್ಯವನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ. ನಂತರ ವಿಡಿಯೋ ತೋರಿಸಿ, 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ಯುವತಿ ಮತ್ತು ಸ್ನೇಹಿತ ಒಪ್ಪಿಕೊಂಡಿದ್ದರಂತೆ. ಮಧ್ಯರಾತ್ರಿಯಾದರೂ ಅಷ್ಟೊಂದು ಹಣ ಹೊಂದಿಸಲು ಅವರಿಬ್ಬರಿಗೂ ಸಾಧ್ಯವಾಗಿಲ್ಲ. ಆಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಆಕೆಯ ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಕಾಮುಕರ ತಂಡ ಪರಾರಿಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಘಟನೆ ಬಗ್ಗೆ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.