ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಚಿತ್ರೀಕರಿಸಿದ ಕಾಮುಕರು... !
Saturday, August 14, 2021
ಜಲ್ನಾ (ಮಹಾರಾಷ್ಟ್ರ): ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಬದ್ನಾಪುರದಲ್ಲಿ ನಡೆದಿದೆ. ಕೃತ್ಯದ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ ಬೆದರಿಕೆ ಒಡ್ಡಿರುವುದಾಗಿ ತಿಳಿದು ಬಂದಿದೆ.
ಬದ್ನಾಪುರದ ಕಂದಾರಿ ಖುರ್ದ್ ಗ್ರಾಮದ ಸೋಪನ್ ಧಕ್ನೆ ಮತ್ತು ಶಂಭು ಧಕ್ನೆ ಅತ್ಯಾಚಾರ ನಡೆಸಿರುವ ಆರೋಪಿಗಳು.
ಸಂತ್ರಸ್ತ ಬಾಲಕಿಯು ಅನಾಥೆಯಾಗಿದ್ದು, ದೇವಸ್ಥಾನದ ಪೂಜಾರಿಯೊಬ್ಬರು ದತ್ತು ಪಡೆದು ಸಾಕುತ್ತಿದ್ದರು. ಈಕೆಯನ್ನು ಹೊಲಕ್ಕೆ ಕರೆದೊಯ್ದ ಕಾಮುಕರು ಅತ್ಯಾಚಾರ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆ.
ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬದ್ನಾಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.