ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಮೃತದೇಹ ಪತ್ತೆ: ಜೊತೆಗಿದ್ದ ಯುವಕನೇ ಕೊಲೆಗೈದ ಶಂಕೆ
Wednesday, August 4, 2021
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನಡುಮಾಕನ ಹಳ್ಳಿಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತಗಿದೆ.
ಕೋಲಾರ ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ (16) ಮೃತಪಟ್ಟವರು.
ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರೂ ಇದರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಸಾಯುವ ಮೊದಲು ತೇಜಸ್ವಿನಿ ಅದೇ ಗ್ರಾಮದ ಮಂಜುನಾಥ್ ಎಂಬ ಯುವಕನೊಂದಿಗೆ ಇದ್ದಿದ್ದು, ಆತನೇ ಕೊಲೆಗೈದು ನೇಣು ಬಿಗಿದ ರೀತಿಯಲ್ಲಿ ಬಿಂಬಿಸಿ ಪರಾರಿ ಆಗಿರಬಹುದು ಎಂದು ಶಂಕಿಸಲಾಗಿದೆ.
ಈ ಘಟನೆಯಿಂದ ಕೋಪಗೊಂಡ ಗ್ರಾಮಸ್ಥರು ರೊಚ್ಚಿಗೆದ್ದು ಮಂಜುನಾಥ್ ಮನೆ ಮೆಲೆ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.