
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ..
Tuesday, August 10, 2021
ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಸಂಭವಿಸಿದೆ.
ಐಶ್ವರ್ಯಾ ಸುಣಗಾರ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೋಮವಾರದಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಗೊಂಡಿತ್ತು ಆದರೆ ಐಶ್ವರ್ಯ ಅತಿ ಹೆಚ್ಚು ಅಂಕವನ್ನು ನಿರೀಕ್ಷೆ ಮಾಡಿದ್ದು ಆಕೆಗೆ 625ಕ್ಕೆ 393 ಅಂಕ ಬಂದಿದೆ.ಈ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.
ಐಶ್ವರ್ಯಾಳ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ ನೆರವೇರಿತು. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.