Header Ad

ಪ್ರಿಯತಮೆ ಮದುವೆಯಾಗಲ್ಲ ಎಂದಿದ್ದಕ್ಕೆ ಟ್ವೀಟ್ ಮಾಡಿ ಆತ್ಮಹತ್ಯೆಗೆ ಯತ್ನ.. ಮುಂದಾಗಿದ್ದೇನು ಗೊತ್ತಾ..??

ಮುಂಬೈ: ಪ್ರಿಯತಮೆ ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್​ ಮಾಡಿದ್ದು ಆತನನ್ನು ಮುಂಬೈ ಸೈಬರ್ ಠಾಣೆ ಪೊಲೀಸರು ರಕ್ಷಿಸಿದರು.

30 ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದ. ಈ ಟ್ವೀಟ್‌ ಗಮನಿಸಿದ ಪತ್ರಕರ್ತರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ವಾಟ್ಸಾಪ್ ಮೂಲಕ ಶನಿವಾರ ಬೆಳಗ್ಗೆ ಮಾಹಿತಿ ನೀಡಿದ್ದರು.  ಪೊಲೀಸರು, ಕೂಡಲೇ ಆತನಿಗಾಗಿ ಹುಡುಕಾಟ ಪ್ರಾರಂಭಿಸಿ ಕೊನೆಗೆ ಆತ ದಾದರ್‌ನಲ್ಲಿರುವ ಐಷಾರಾಮಿ ಹೋಟೆಲ್‌ವೊಂದರಲ್ಲಿ ಇರುವುದಾಗಿ ಗೊತ್ತಾಗಿದೆ.

ಪೊಲೀಸರು ಬಾಗಿಲು ತೆರೆದು ನೋಡಿದಾಗ, ವಿದ್ಯಾರ್ಥಿ ಚಾಕುವಿನಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಆತನನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಇತ್ತೀಚಿನ ಸುದ್ದಿಗಳು