
ಗಂಡನ ಅಕ್ರಮ ಸಂಬಂಧ ಬಯಲು ಮಾಡಿದ ಬೆನ್ನಲ್ಲೇ.. ಮಾವನ ಕಾಮದ ಮುಖವಾಡ ಬಿಚ್ಚಿಟ್ಟ ಹನಿಸಿಂಗ್ ಪತ್ನಿ..
Friday, August 6, 2021
ಮುಂಬೈ: ಬಾಲಿವುಡ್‌ನ ಗಾಯಕ ಯೋ ಯೋ ಹನಿ ಸಿಂಗ್ ವಿರುದ್ಧ ಅವರ ಪತ್ನಿಯಿಂದಲೇ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ ಕಾಯ್ದೆ ಅಡಿ ದೆಹಲಿಯ ಟಿಸ್ ಹಜಾರಿ ಕೋರ್ಟ್‌ನಲ್ಲಿ ಯೋ ಯೋ ಹನಿ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗಂಡನಿಗೆ ಅನೇಕ ಮಹಿಳೆಯರೊಂದಿಗೆ ವಿವಾಹೇತರ ಸಂಬಂಧ ಇದೆ ಇದನ್ನು ಪ್ರಶ್ನಿಸಿದರೆ ಮೃಗೀಯ ರೀತಿಯಲ್ಲಿ ವರ್ತಿಸುತ್ತಾರೆಂದು ಆರೋಪ ಮಾಡಿದ್ದಾರೆ ಅಷ್ಟೇ ಅಲ್ಲದೆ ಇದೀಗ ಹನೀ ಸಿಂಗ್ ತಂದೆ ವಿರುದ್ಧ ಶಾಲಿನಿ ಗರೆ. ಮಾವನು ಕೂಡ ಲೈಂಗಿಕ ಕಿರುಕುಳ ನೀಡಿದ್ದಾರೆ. ಒಂದು ದಿನ ನಾನು ಕೋಣೆಯಲ್ಲಿ ಬಟ್ಟೆ ಬದಲಾಯಿಸುವಾಗ ಹನಿ ಸಿಂಗ್ ತಂದೆ ಪಾನಮತ್ತ ಸ್ಥಿತಿಯಲ್ಲಿ ನನ್ನ ಕೋಣೆಯೊಳಗೆ ನುಗ್ಗಿದರು. ನನ್ನ ಎದೆಯನ್ನು ಹಿಡಿದುಕೊಂಡು ಕಿರುಕುಳ ನೀಡಿದರು ಎಂದು ಆರೋಪ ಮಾಡಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದಿರುವ ಶಾಲಿನಿ, 20 ಕೋಟಿ ರೂಪಾಯಿ ಪರಿಹಾರ, ತಿಂಗಳಿಗೆ 5 ಲಕ್ಷ ರೂಪಾಯಿ ಹಣ, ಮುಂಬೈನ ಪ್ರತಿಷ್ಠಿತ ಜಾಗದಲ್ಲಿ ಫುಲ್ ಫರ್ನಿಷ್ ಆಗಿರುವ ಬಂಗಲೆ ನೀಡಲು ಆದೇಶಿಸಬೇಕು ಹಾಗೂ ತಾನು ಮದುವೆಯ ವೇಳೆ ನೀಡಿರುವ ವರದಕ್ಷಿಣೆಯನ್ನು ಸಂಪೂರ್ಣವಾಗಿ ಹಿಂದಿರುಗಿಸಲು ಗಂಡನಿಗೆ ಆದೇಶಿಸಬೇಕು ಎಂದು ಶಾಲಿನಿ ಕೋರಿದ್ದಾರೆ.